ಪಾವಗಡ : ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ದಲಿತರು ಎಂಬ ಕಾರಣಕ್ಕೆ ಹಟ್ಟಿಯೊಳಗೆ ಪ್ರವೇಶಿಸಲು ನಿರಾಕರಿಸಿದ ಘಟನೆ ಪಾವಗಡ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.!

ಖಾಸಗಿ ಕಂಪನಿಗಳ ತಂಡದೊಂದಿಗೆ ಊರಿಗೆ ಬಂದಿದ್ದ ಸಂಸದ ನಾರಾಯಣಸ್ವಾಮಿ ಪೆಮ್ಮನಹಳ್ಳಿಗೂ ಭೇಟಿ ಕೊಟ್ಟಿದ್ದರು. ಈ ವೇಳೆ ಎದುರಾದ ಗೊಲ್ಲರಹಟ್ಟಿ ನಿವಾಸಿಗಳು ಹಟ್ಟಿಯ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿ, ಅಲ್ಲಿಯೇ ಕುರ್ಚಿ ಹಾಕಿ ಕೂರಲು ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ನಿಮ್ಮ ಜನಾಂಗದವರು ಹಟ್ಟಿ ಒಳಗಡೆ ಹೋಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ನೀವು ಗೊಲ್ಲರಹಟ್ಟಿ ಪ್ರವೇಶ ಮಾಡಿದರೆ ನಮಗೆ ಮಾತ್ರ ಅಲ್ಲ, ನಿಮಗೆ ಕೆಟ್ಟದಾಗುತ್ತದೆ. ಬಲವಂತವಾಗಿ ನುಗ್ಗಿದ, ಸುಳ್ಳು ಹೇಳಿ ಒಳಗೆ ಬಂದಿದ್ದ ಹಲವರಿಗೆ ಅನಾಹುತ ಉಂಟಾಗಿದೆ. ಆ ಅನಾಹುತ ನಿಮಗೆ ಆಗೋದು ಬೇಡ ಎಂದು ನಾರಾಯಣಸ್ವಾಮಿಗೆ ಸಮಾಧಾನಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ನಾನು ಅತಿಹೆಚ್ಚು ಗೊಲ್ಲರ ಮತದಿಂದ ಗೆದ್ದು ಬಂದಿದ್ದೇನೆ. ಅವರ ಸಮುದಾಯಕ್ಕೆ ಏನಾದರೊಂದು ಒಳ್ಳೆದು ಮಾಡಬೇಕು ಎಂದು ಬಂದಿದ್ದೇನೆ. ಈ ಒಂದು ಕಾರಣಕ್ಕೆ ನೀವು ಅವಮಾನ ಮಾಡಿದರೂ ಸುಮ್ಮನಿದ್ದೇನೆ ಎಂದು ಸೌಜನ್ಯದಿಂದ ವರ್ತಿಸಿದ್ದಾರೆ.