ಬೆಂಗಳೂರು: ಹಾಸನದ ಹೊಳೆನರಸೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಕುಟುಂಬದವರು ಕಣ್ಣೀರು ಹಾಕಿರುವುದಕ್ಕೆ ರಾಜ್ಯ ಬಿಜೆಪಿ ಅಣಕಿಸಿ, ಟ್ವೀಟ್ ಮಾಡಿದೆ.

ಲೋಕಸಭೆ ಚುನಾವಣೆ ಪ್ರಾರಂಭವಾಗುತ್ತಿದ್ದಂತೆ ಮೊದಲ ನಾಟಕ ಪ್ರಾರಂಭವಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ, ಪುಲ್ವಾಮಾ ದಾಳಿಗೆ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ, ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು, ರಾಜ್ಯದ ಜನ ಈಗಲೂ ಮರುಳಾಗುವರೇ ಎಂದು ಬಿಜೆಪಿ ಪ್ರಶ್ನಿಸಿದೆ.