ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ 15 ಜನರ ಸದಸ್ಯತ್ವವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

14 ನೇ ಹಣಕಾಸು ಯೋಜನೆಯ ಅನುದಾನದ ಹಣವನ್ನು ವೈಯಕ್ತಿಕ ಕಾರಣಕ್ಕೆ ಬಳಸಿಕೊಂಡ ಕಾರಣಕ್ಕೆ ರಾಯಚೂರು ತಾಲೂಕಿನ ಎಲೆ ಬಿಚ್ಚಾಲಿ ಗ್ರಾ.ಪಂ. ಅಧ್ಯಕ್ಷೆ, ಉಪಾಧ್ಯಕ್ಷೆ ಸೇರಿ ಒಟ್ಟು 15 ಜನ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.!