ರಾಮನಗರ : ರಾಜ್ಯ ಸರ್ಕಾರವು ರಾಜ್ಯದ ಗ್ರಾಮಪಂಚಾಯಿತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಡಳಿತ ವಿಕೇಂದ್ರೀಕರಣವನ್ನು ಮತ್ತಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಪ್ರತಿ ಗ್ರಾಮಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

15 ನೇ ಹಣಕಾಸು ಆಯೋಗದ ವರದಿಯಲ್ಲಿ ಗ್ರಾಮಪಂಚಾಯಿತಿಗಳಿಗೆ ನೇರವಾಗಿ ಹೆಚ್ಚು ಅನುದಾನ ನೀಡುವ ಅಂಶವಿದೆ. ಅದರಂತೆ, ಗ್ರಾಮೀಣಾಭಿವೃದ್ಧಿಗೆ ಬೇಕಾದ ಎಲ್ಲ ಹಣಕಾಸು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಆಯಾ ಗ್ರಾಮಗಳ ಯೋಜನೆಗಳ ಅನುಷ್ಠಾನದ ಹೊಣೆಯನ್ನು ಜಿಲ್ಲಪಂಚಾಯಿತಿಯಿಂದ ಗ್ರಾಮಪಂಚಾಯಿತಿಗಳಿಗೆ ವಹಿಸಲಾಗುವುದು ಎಂದು ಹೇಳಿದ್ದಾರೆ.