ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದ ಭಾರತ್‌ ನೆಟ್‌ ಯೋಜನೆಯನ್ನು ಚುರುಕುಗೊಳಿಸುವ ಮೂಲಕ ಮೂರ್ನಾಲ್ಕು ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಇಂಟರ್ನೆಟ್‌ ಸಂಪರ್ಕದ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಜ್ಯದಲ್ಲಿ 93,834 ಭಾರತ್‌ನೆಟ್‌ ಚಂದಾದಾರರು ಇದ್ದು, ಜನವರಿಯಿಂದ ಮೇ ತಿಂಗಳವರೆಗೆ 30,239 ಜಿಬಿ ಡಾಟಾ ಬಳಕೆ ಮಾಡಿಕೊಂಡಿದ್ದಾರೆ ಎಂದರು.