ಬೆಂಗಳೂರು: 164 ತಾಲ್ಲೂಕುಗಳಲ್ಲಿ ಭೂ ನ್ಯಾಯ ಮಂಡಳಿ ರಚಿಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದು, ಡ್ರೋನ್ ಆಧಾರಿತ ಸರ್ವೆ ಸಮಿತ್ವ ಯೋಜನೆಯಡಿ 16000 ಗ್ರಾಮಗಳನ್ನು ಗುರುತಿಸಲಾಗಿದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆ ನಡೆಸಿದರು. ಗ್ರಾಮ ನಿವಾಸಿಗಳಿಗೆ ಅವರ ವಾಸಸ್ಥಳದ ಆಸ್ತಿಗಳಿಗೆ ಪ್ರಾಪರ್ಟಿ ಕಾರ್ಡ್ ವಿತರಿಸುವ ಯೋಜನೆ ಇದಾಗಿದೆ. ದೇಶದ 7 ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯದಲ್ಲಿಯೂ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯ ಅನುಷ್ಠಾನವನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಸಿಎಂ ತಿಳಿಸಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ 2020-21 ನೇ ಸಾಲಿನಲ್ಲಿ 3524 ಕೋಟಿ ರೂ.ಗಳಷ್ಟು ಕಡಿಮೆ ರಾಜಸ್ವ ಸಂಗ್ರಹವಾಗಬಹುದೆಂದು ಅಂದಾಜಿಸಲಾಗಿದೆ. ಕೈಗೆಟಕುವ ದರಗಳ ಮನೆಗಳನ್ನು ಪ್ರೋತ್ಸಾಹಿಸಲು 20 ಲಕ್ಷ ರೂ. ಮೌಲ್ಯದ ಅಪಾರ್ಟ್‍ಮೆಂಟ್‍ಗಳ ಮೊದಲ ನೊಂದಣಿಗೆ ಮುದ್ರಾಂಕ ಶುಲ್ಕವನ್ನು ಶೇಕಡ 5 ರಿಂದ ಶೇಕಡ 2 ಕ್ಕೆ ಇಳಿಸಲು ಹಾಗೂ 35 ಲಕ್ಷ ರೂ. ಮೌಲ್ಯದವರೆಗಿನ ನೊಂದಣಿಗೆ ಶೇಕಡ 5 ರಿಂದ ಶೇ.ಕಡ 3 ಕ್ಕೆ ಇಳಿಸಲು ಸಿಎಂ ಸೂಚಿಸಿದ್ದಾರೆ.

ಜೊತೆಗೆ ಅನುಭವ ಮಂಟಪ ಸ್ಥಾಪನೆಗೆ 100 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.