ಬೆಂಗಳೂರು : ಗ್ರಾಮಪಂಚಾಯಿತಿಗಳಿಗೆ ಆಡಳಿತ ಸಮಿತಿ ಬದಲು ಆಡಳಿತಾಧಿಕಾರಿ ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ.

ವಿಧಾನಸೌಧದಲ್ಲಿ ಗುರುವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬರುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸುವ ನಿರ್ಧಾರ ಕೈಗೊಳ್ಳಲಾಯಿತು.

ಸಚಿವ ಸಂಪುಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಗ್ರಾಮಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ ಸಂಬಂಧ ಜಿಲ್ಲಾಧಿಕಾರಿ ಮಟ್ಟದಲ್ಲಿ ತೀರ್ಮಾನ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು.