ಮಂಡ್ಯ: ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ‌ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಾರ್ಚ್‌ 18 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಲಾಕ್ ಡೌನ್ ಹಿನ್ನೆಲೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿತ್ತು. ಪ್ರಸ್ತುತ ಜೂನ್‌ 01 ಅರ್ಜಿ ಸಲ್ಲಿಸಲು ಕಡೆ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ http://mandya-va.kar.nic.in/ಗೆ ಸಂಪರ್ಕಿಸಬಹುದು.