ಚಿತ್ರದುರ್ಗ:  ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿ ಸೊಂಡೇಕೆರೆ ಕಂದಾಯ ವೃತ್ತದಲ್ಲಿ ಖಾಲಿ ಇರುವ ಗ್ರಾಮಸಹಾಯಕ ಹುದ್ದೆಗೆ ಹಿರಿಯೂರು ತಹಶೀಲ್ದಾರ್ ಕಚೇರಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಸೊಂಡೇಕೆರೆ ಕಂದಾಯ ವೃತ್ತದ ಗ್ರಾಮಸಹಾಯಕ ಹುದ್ದೆ ಖಾಲಿ ಇದ್ದು, ಹೊಸ ಗ್ರಾಮಸಹಾಯಕರನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.

ಅರ್ಹತೆಗಳು: ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷ ವಯಸ್ಸು ಪೂರ್ಣಗೊಂಡಿರಬೇಕು. ಅಕ್ಷರಸ್ಥರಾಗಿರಬೇಕು. ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕು. ಈ ಹಿಂದೆ ಇದೇ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ದಾಖಲೆ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೆ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಮೊಕದ್ದಮೆ ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು ಎಂದು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.