ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆಗಳನ್ನು ಕೊರೋನಾ ಹಿನ್ನೆಲೆಯಲ್ಲಿ ಮುಂದಕ್ಕೆ ಹಾಕಿ ಚುನಾವಣಾ ಆಯೋಗ ಆದೇಶಿಸಿದೆ.

ಏಕೆಂದ್ರೆ ಕೊರೋನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಹಾಗಾಗಿ ಈ ಹಂತದಲ್ಲಿ ಚುನಾವಣೆ ನಡೆಸದಿರುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಆಯೋಗ ಬಂದಿದೆ.

ಜಿಲ್ಲಾಧಿಕಾರಿಗಳ ವರದಿ ಅನ್ವಯ ಆಯೋಗ ಚುನಾವಣೆಗಳನ್ನು ಮುಂದೂಡಿದೆ. ಆದರೆ, ದಿನಾಂಕ ಇನ್ನೂ ತಿಳಿಸಿಲ್ಲ ಎಂದು ಆಯೋಗ ಹೇಳಿದೆ.