ನೆಲ್ಯಾಡಿ: ನೆಲ್ಯಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಚಿಕ್ಕಾಬಳ್ಳಾಪುರದಿಂದ ಹೊರಟು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದು ಪಲ್ಟಿಯಾದ ಘಟನೆ ಎಂಜಿರ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಮುಂಜಾನೆ ನಾಲ್ಕು ಘಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ನಿದ್ದೆ ಮಂಪರಿನಲ್ಲಿಯಿದ್ದುದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಸೇರಿ ಒಟ್ಟು ಐವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು. ಘಟನೆ ಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ, ಎಂದು ತಿಳಿದು ಬಂದಿದೆ.