ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ವರದಿ ಬರಲು ಬಾಕಿ ಉಳಿದಿದ್ದ ಎಲ್ಲ ಪ್ರಕರಣಗಳ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದ್ದು, ಯಾವುದೇ ಪ್ರಕರಣಗಳ ವರದಿ ಬರುವುದು ಬಾಕಿ ಇಲ್ಲ.  ಜಿಲ್ಲೆಯಲ್ಲಿ ವರದಿಯಾಗಿದ್ದ ಒಟ್ಟು 43 ಸೋಂಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಲ್ಲ 43 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಇದೀಗ ಚಿತ್ರದುರ್ಗ ಜಿಲ್ಲೆ ಸೋಂಕು ಮುಕ್ತ ಜಿಲ್ಲೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.

     ಚಿತ್ರದುರ್ಗ ಜಿಲ್ಲೆಯಲ್ಲಿಯೇ ಇದೀಗ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಪರೀಕ್ಷಾ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದ್ದು, ಜೂ. 16 ರಂದು 14 ಜನರ ಪ್ರಯೋಗಾಲಯ ವರದಿ ಬರುವುದು ಬಾಕಿ ಇತ್ತು.  ಜೂ. 17 ರಂದು 54 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಹೀಗಾಗಿ ಬಾಕಿ ಇದ್ದ ಎಲ್ಲ ಒಟ್ಟು 68 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದ್ದು, ವರದಿ ಬರುವ ಯಾವುದೇ ಪ್ರಕರಣ ಬಾಕಿ ಇರುವುದಿಲ್ಲ.

    ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 43 ಇದ್ದು, ಎಲ್ಲ 43 ಜನ ಈಗಾಗಲೆ ಗುಣಮುಖರಾಗಿದ್ದಾರೆ. ಈವರೆಗೆ 4156 ಜನರ ಮಾದರಿ ಸಂಗ್ರಹಿಸಲಾಗಿದ್ದು, 3989 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 126 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ.  ಸದ್ಯ ಜಿಲ್ಲೆಯಲ್ಲಿ 2989 ಜನರು ಹೋಂ ಕ್ವಾರಂಟೈನ್‍ನಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.