ಬೆಂಗಳೂರು; ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಕಿಚ್ಚ ಸುದೀಪ್ ಅನೇಕರಿಗೆ ಮಾದರಿಯಾಗಿದ್ದಾರೆ.

ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಮೂರು ಹಾಗೂ ಹಿರಿಯೂರು ತಾಲ್ಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿದೆ.

ಈ ಶಾಲೆಗಳಿಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ನೀಡುವುದಕ್ಕೆ ಟ್ರಸ್ಟ್ ಮುಂದಾಗಿದೆ. ಸುದೀಪ್ ಅವರ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.!