ಚಿತ್ರದುರ್ಗ:  ಜಿಲ್ಲೆಯಲ್ಲಿ ರಾತ್ರಿ ಭಾರಿ ಮಳೆಗೆ ಚಿತ್ರದುರ್ಗ ಐತಿಹಾಸಿಕ ಚಂದ್ರವಳ್ಳಿ ಕೆರೆ ಕೋಡಿ ಬಿದ್ದು ಕಿರುಜಲಪಾತ ಸೃಷ್ಟಿಯಾಗಿದೆ.

 ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಕೆರೆ ಕೋಡಿ ಬಿದ್ದ ಪರಿಣಾಮ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದೆ. ಮತ್ತೊಂದೆಡೆ ರಾತ್ರಿ ಸುರಿದ ಮಳೆಗೆ ಜಿಲ್ಲೆಯ ಹಲವೆಡೆ ಕೃಷಿ ಹೊಂಡಗಳು, ಚೆಕ್ ಡ್ಯಾಂಗಳು ಭರ್ತಿಯಾಗಿವೆ. ಇತ್ತ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ, ರೇಣುಕಾಪುರ ಹಳ್ಳಗಳು ಸಹ ಮೈದುಂಬಿ ಹರಿಯುತ್ತಿವೆ.

ಹಿರಿಯೂರು ತಾಲ್ಲೂಕಿನ ಅರಳಿಕೆರೆ ದೊಡ್ಡಹಳ್ಳ ತುಂಬಿ ಹರಿಯುತ್ತಿದೆ. ಐಮಂಗಲ, ಮಸ್ಕಲ್, ಆರನಕಟ್ಟೆ, ಮತ್ತಿತರ ಕಡೆ ಉತ್ತಮ ಮಳೆಯಾಗಿದೆ.