ದಾವಣಗೆರೆ : ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಎಂಬುದು ಪಿಡುಗು ಈ ಪಿಡುಗಿನ ಬಗ್ಗೆ ನಟ ಚೇತನ್ ಹೇಳಿದ್ದು, ಕನ್ನಡ ಚಿತ್ರರಂಗದಲ್ಲಿರುವ ಕಾಸ್ಟಿಂಗ್ ಕೌಚ್ ಬಗ್ಗೆ ಹಿರಿಯ ಕಲಾವಿದರು ಮೌನ ಮುರಿಯಬೇಕು ಎಂದು ನಟ ಚೇತನ್ ಹೇಳಿದರು.

ಜಿಲ್ಲಾ ವರದಿಗಾರರ ಕೂಡ ಭಾನುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು ‘ ಚಿತ್ರರಂಗ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಕಾಸ್ಟಿಂಗ್ ಕೌಚ್ ಇದೆ. ಹಿರಿಯ ಕಲಾವಿದರು ಮುಕ್ತವಾಗಿ ಮಾತನಾಡುವ ಮೂಲಕ ಕಾಸ್ಟಿಂಗ್ ಕೌಚ್ ತೊಲಗುವಂತೆ ಮಾಡಬೇಕು’ ಎಂದು ಅವರು ಹೇಳಿದ್ದಾರೆ.