ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್ ಅವರ ಸಾಂಸಾರಿಕ ಜೀವನ ಸಂಬಂಧ ಕಲ್ಯಾಣ್ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ಅವರ ಪರ ವಕೀಲ ಸತೀಶ್ ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ, ಅಶ್ವಿನಿ ಅವರು ತಮ್ಮ ಪತಿ ವಿರುದ್ಧ ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದ ಮೊರೆಹೋಗಿದ್ದು, ಕಳೆದ ಜೂ.26ರಂದು ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ನನ್ನ ಪತಿ ದೈಹಿಕ, ಮಾನಸಿಕವಾಗಿ ಹಿಂಸಿಸುತ್ತಿದ್ದು, ವಿಚ್ಛೇದನ ಕೊಡಿಸಿ ಎಂದು ಮನವಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.