ಮೈಸೂರು: ಮೈಸೂರಿನಲ್ಲಿ ಕೊರೋನಾ ಪ್ರಕರಣ ಮತ್ತು ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ, ಈ ಬಾರಿ ದಸರಾ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪ್ರವೇಶ ನೀಡಬಾರದು ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಅ.17ರಂದು ದಸರಾ ಉದ್ಘಾಟನೆಗೆ 200, ಅ.26ರಂದು ಜಂಬೂಸವಾರಿಗೆ 300 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಬೇಕು. ಸಾರ್ವಜನಿಕರಿಗೆ ವರ್ಚುವಲ್‌ ಆಗಿ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು ಶಿಫಾರಸು ಮಾಡಲಾಗಿದೆ.