ನವದೆಹಲಿ: ಪಲ್ಸ್ಪೋಲಿಯೋ ಕಾರ್ಯಕ್ರಮವನ್ನು ದೇಶದಲ್ಲಿ ಜನವರಿ 31 ರಂದು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧಾರ ಪ್ರಕಟಿಸಿದೆ.

ಈ ಅಭಿಯಾನಕ್ಕೆ ಜನವರಿ 30 ರಂದು ರಾಷ್ಟ್ರಪತಿ ಭವನದಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಹಿಂದೆ ಜನವರಿ 17 ಕ್ಕೆ ನಿಗದಿಪಡಿಸಲಾಗಿದ್ದ ಈ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. ಜನವರಿ 16  ರಂದು ದೇಶಾದ್ಯಂತ ಕೊವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಆರೋಗ್ಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಸ್ವಲ್ಪ ದಿನಗಳ ಕಾಲ ಮುಂದೂಡಲಾಗಿತ್ತು. ಇದೀಗ ಜನವರಿ 31  ಕ್ಕೆ ಪಲ್ಸ್ ಪೋಲಿಯೋ ಅಭಿಯಾನ ನಿಗಧಿಪಡಿಸಲಾಗಿದೆ.