ಬಳ್ಳಾರಿ :  ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮತದಾನ ಮಾಡುವ ಅವಕಾಶ ಕಳೆದುಕೊಂಡಿದ್ದಾರೆ ಏಕೆಂದ್ರೆ.?

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶ ಮಾಡದಂತೆ ಕೋರ್ಟ್ ಷರತ್ತು ವಿಧಿಸಿತ್ತು. ಈ ಮಧ್ಯೆ ರೆಡ್ಡಿ ಮತದಾನ ಮಾಡಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ರೆಡ್ಡಿ ಮನವಿಯನ್ನು ಅಂಗೀಕರಿಸಲಿಲ್ಲ. ಹೀಗಾಗಿ ಅವರು ಬಳ್ಳಾರಿಯಲ್ಲಿ ಮತದಾನ ಮಾಡಲು ಸಾಧ್ಯವಿಲ್ಲ..

ಆದರೆ ರೆಡ್ಡಿ ಪತ್ನಿ, ಮಗ ಹಾಗೂ ಕುಟುಂಬಸ್ಥರು ಬಳ್ಳಾರಿಯಲ್ಲಿ ಮತ ಹಕ್ಕು ಚಲಾಯಿಸಿದ್ದಾರೆ. ಜನಾರ್ದನ ರೆಡ್ಡಿ ಅವರು ಗದಗನಲ್ಲಿ ಮತದಾನಕ್ಕೆ ನೋಂದಣಿ ಮಾಡಿಸಿರುವುದು ಕೂಡ ರದ್ದಾಗಿದೆ. ಹಾಗಾಗಿ ಈಬಾರಿ ರೆಡ್ಡಿ ಮತದಾನದಿಂದ ವಂಚಿತರಾಗಿದ್ದಾರೆ.!