ಬೆಂಗಳೂರು : ನಮ್ಮ ಪಕ್ಷದ ಸ್ಟಾರ್ ಕ್ಯಾಂಪೇನರ್ ಅಲ್ಲ ಮಾಜಿ ಸಚಿವ ಜನಾರ್ದನರೆಡ್ಡಿ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್  ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಯನ್ನು ಬಿಜೆಪಿ ಸ್ಟಾರ್ ಕ್ಯಾಂಪೇನರ್ ಎಂದು ಗುರುತಿಸಿಲ್ಲ, ರಾಜ್ಯದ ಕೆಲ ಭಾಗದಲ್ಲಿ ತಮ್ಮ ಆಪ್ತರ ಪರ ಪ್ರಚಾರ ಕಾರ್ಯದಲ್ಲಿ ಅವರು ನಿರತರಾಗಿದ್ದಾರೆ ಎಂದು ಹೇಳಿದ್ದಾರೆ.

ಕಳೆದವಾರ ಅಮಿತ್ ಶಾ ಅವರು ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂಬ ಹೇಳಿಕೆ ನೀಡಿದ್ದರು. ಆದರೆ ಇದೀಗ ಪ್ರಕಾಶ್ ಜಾವಡೇಕರ್ ಅವರು ಜನಾರ್ದನ ರೆಡ್ಡಿ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಅಲ್ಲ ಎಂದು ಹೇಳಿಕೆ ನೀಡಿರುವುದು ಬಳ್ಳಾರಿ ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಚಲಿತರಾಗಿದ್ದಾರಂತೆ