ನವದೆಹಲಿ: ಎಸ್.ಸಿ ಎಸ್.ಟಿ ವ್ಯಕ್ತಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಯಾವುದೇ ಸರ್ಕಾರಿ ನೌಕರರು ಅಥವಾ ವ್ಯಕ್ತಿಗಳ ವಿರುದ್ಧ ದೂರು ದಾಖಲಾದರೆ ತಕ್ಷಣಕ್ಕೆ ಅವರನ್ನು ಬಂಧಿಸಕೂಡದು ಎಂದು ಸುಪ್ರೀಂ ಕೋರ್ಟ್‌ ತೀರ್ಪು.

ಈ ಕಾಯ್ದೆ ಅಡಿ ಯಾರನ್ನೇ ಬಂಧಿಸುವ ಮೊದಲು ಪ್ರಕರಣದ ಬಗ್ಗೆ ಡಿವೈಎಸ್‌ಪಿ ಅಥವಾ ಅದಕ್ಕಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಒಪ್ಪಿಗೆ ನೀಡುವುದು ಕಡ್ಡಾಯ ಎಂದು ನಿರ್ದೇಶನ ನೀಡಲಾಗಿದೆ.

ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ–1989 ದುರುಪಯೋಗ ಹೆಚ್ಚಾಗುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್‌ ಈ ತೀರ್ಪು ಹೇಳಿದೆ.

ಜಾತಿ ನಿಂದನೆ ದೂರಿನಲ್ಲಿರುವ ಸತ್ಯಾಂಶದ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ಪರಾಮರ್ಶೆ ನಡೆಸಿ ತನಿಖಾ ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಲಾಗಿದೆ.

‘ಸುಪ್ರೀಂ’ ನಿರ್ದೇಶನ: ಎಸ್‌ಸಿ, ಎಸ್‌ಟಿ ಕಾಯ್ದೆಯ ದುರುಪಯೋಗ ತಡೆಯುವ ನಿಟ್ಟಿನಲ್ಲಿ ನ್ಯಾಯಮೂರ್ತಿಗಳಾದ ಆದರ್ಶ್‌ ಗೋಯಲ್‌ ಮತ್ತು ಯು.ಯು. ಲಲಿತ್‌ ಅವರ ಪೀಠವು ಕೆಲವು ಮಾರ್ಗಸೂಚಿಯನ್ನು ಹೇಳಲಾಗಿದೆ.

ಈ ಕಾಯ್ದೆ ಅಡಿ ದೂರು ದಾಖಲಾದರೆ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನಿರಾಕರಿಸುವಂತಿಲ್ಲ. ಒಂದು ವೇಳೆ ವ್ಯಕ್ತಿಯ ಬಂಧನ ಅನಿವಾರ್ಯವಾದರೆ ಸಂಬಂಧಿಸಿದ ಇಲಾಖೆ, ಹಿರಿಯ ಅಧಿಕಾರಿಗಳ (ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ) ಪೂರ್ವಾನುಮತಿ ಪಡೆಯುವುದು ಕಡ್ಡಾಯ.

ಹಾಗಾಗಿ ಇನ್ನುಮುಂದೆ ಜಾತಿ ನಿಂದನೆ ಕೇಸ್ ದಾಖಲಿಸುವಾಗ ಕೆಲವೊಂದು ಶರತ್ತುಗಳು ಅನ್ವಯವಾಗಲಿವೆ.