ಬೆಂಗಳೂರು: ಎಷ್ಟೇ ಪ್ರಭಾವಿ ಆಗಿದ್ದರೂ ಒಂದು ಜಾತಿಯಿಂದ ಗೆಲುವು ಅಸಾಧ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.  

ಒಂದು ಜಾತಿಯಿಂದ ಯಾರೂ ಕರ್ನಾಟಕದಲ್ಲಿ ಗೆಲ್ಲೋದಕ್ಕೆ ಆಗುವುದಿಲ್ಲ. ನಮ್ಮ ಪಕ್ಷವನ್ನು ಯಾರಾದರೂ ಒಡೆಯುತ್ತಾರೆ ಎಂದರೆ ಅದು ಅವರ ಭ್ರಮೆ. ಯಾವುದೇ ಕಾರಣಕ್ಕೂ ನಮ್ಮ ಪಕ್ಷವನ್ನು ಒಡೆಯಲು ಸಾಧ್ಯವಿಲ್ಲ.

ಜೆಡಿಎಸ್ ಪಕ್ಷವನ್ನು ಯಾರೇ ಬಂದರೂ ತುಳಿಯಲು ಆಗುವುದಿಲ್ಲ. ದೇಶದಲ್ಲಿ ಮುಸ್ಲಿಂ ಮೀಸಲಾತಿ, ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಹೇಳಿದ್ದಾರೆ