ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ಮತ್ತೆ 21 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,551 ಕ್ಕೆ ಏರಿಕೆಯಾಗಿದೆ.
 

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 73 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಹೊಳಲ್ಕೆರೆ  ತಾಲ್ಲೂಕಿನಲ್ಲಿ 17, ಮೊಳಕಾಲ್ಮೂರು-01 ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ 03 ಸೇರಿದಂತೆ ಒಟ್ಟು 21 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
 

ಸೋಮವಾರ ಒಟ್ಟು 377 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 21 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1,551 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 19 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 1,065 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 466 ಸಕ್ರಿಯ ಪ್ರಕರಣಗಳು ಇವೆ.
  ಸದ್ಯ ಜಿಲ್ಲೆಯಲ್ಲಿ ಒಟ್ಟು 459 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 10,102 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
 

ಈವರೆಗೆ 30,068 ಜನರ ಮಾದರಿ ಸಂಗ್ರಹಿಸಲಾಗಿದ್ದು, 22,572 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 5,606 ಜನರ ವರದಿ ಬರುವುದು ಬಾಕಿ ಇದೆ. 339 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.