ಚಿತ್ರದುರ್ಗ : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ 21 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 154 ಕ್ಕೆ ಏರಿಕೆಯಾದಂತಾಗಿದೆ.  ಗುರುವಾರದಂದು ಒಬ್ಬರು ಕೋವಿಡ್‍ನಿಂದ ಮೃತಪಟ್ಟಿರುವ ಪ್ರಕರಣ ವರದಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಮೂವರು ಸಾವನ್ನಪ್ಪಿದ್ದಾರೆ.

ಗುರುವಾರದ ವರದಿಯಲ್ಲಿ ಚಿತ್ರದುರ್ಗದ 59, 62, 50, 45, 36 ವರ್ಷದ ಪುರುಷರು, 19 ವರ್ಷದ ಯುವತಿ, 28 ಹಾಗೂ 33 ವರ್ಷದ ಮಹಿಳೆ,  ಚಳ್ಳಕೆರೆಯ 36, 53 ವರ್ಷದ ಪುರುಷರು, 40 ವರ್ಷದ ಮಹಿಳೆ, ಮೊಳಕಾಲ್ಮೂರಿನ 43 ವರ್ಷದ ಪುರುಷ, ಹೊಸದುರ್ಗದ 21, 58, 40, 27 ವರ್ಷದ ಪುರುಷ, 35, 55 ವರ್ಷದ ಮಹಿಳೆಯರು, ಚಿಕ್ಕಜಾಜೂರಿನ 34 ವರ್ಷದ ಪುರುಷ, ಹೊಳಲ್ಕೆರೆಯ 23 ವರ್ಷದ ಪುರುಷ, ಹಿರಿಯೂರಿನ 53 ವರ್ಷದ ಪುರುಷ ಸೇರಿದಂತೆ ಸೇರಿದಂತೆ ಒಟ್ಟು 21 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.  ಗುರುವಾರ ಒಟ್ಟು 355 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 21 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಮೂವರು ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 96 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 55 ಸಕ್ರಿಯ ಪ್ರಕರಣಗಳು ಇವೆ.

55 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 20, ಹಿರಿಯೂರು ತಾಲ್ಲೂಕು ಧರ್ಮಪುರ-05, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 02, ಹೊಸದುರ್ಗ ತಾಲ್ಲೂಕು ಬೆಲಗೂರು- 04, ಮೊಳಕಾಲ್ಮೂರು ತಾಲ್ಲೂಕು ರಾಂಪುರ- 01, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 02, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 05 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 06.  ಉಳಿದ 08 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 42 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2102 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 3191 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ 445 ಜನ ಹೋಂ ಕ್ವಾರಂಟೈನ್‍ನಲ್ಲಿ ಹಾಗೂ ಇಬ್ಬರು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇದ್ದಾರೆ.  ಈವರೆಗೆ 10052 ಜನರ ಮಾದರಿ ಸಂಗ್ರಹಿಸಲಾಗಿದ್ದು, 6567 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 192 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.