ಚಿತ್ರದುರ್ಗ ;ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ಮತ್ತೆ 24 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 178 ಕ್ಕೆ ಏರಿಕೆಯಾದಂತಾಗಿದೆ.
ಶುಕ್ರವಾರದ ವರದಿಯಲ್ಲಿ ಚಿತ್ರದುರ್ಗದ 54, 22, 48, 59, 58, 17, 51, 28 ವರ್ಷದ ಪುರುಷರು, 44 ವರ್ಷದ ಮಹಿಳೆ.  ಚಳ್ಳಕೆರೆಯ 20, 28 ವರ್ಷದ ಪುರುಷರು, 30, 48 ವರ್ಷದ ಮಹಿಳೆ.  ಹೊಸದುರ್ಗದ 30, 33, 27, 28, 45 ವರ್ಷದ ಪುರುಷರು, ಹೊಳಲ್ಕೆರೆಯ 17, 21 ವರ್ಷದ ಪುರುಷ, ಹಿರಿಯೂರಿನ 44, 34 ವರ್ಷದ ಪುರುಷ, 45 ವರ್ಷದ ಮಹಿಳೆ, ತುಮಕೂರು ಜಿಲ್ಲೆಯ 59 ವರ್ಷದ ಪುರುಷ ಸೇರಿದಂತೆ ಒಟ್ಟು 24 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಶುಕ್ರವಾರ ಒಟ್ಟು 359 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 24 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 178 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಮೂವರು ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 103 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 69 ಸಕ್ರಿಯ ಪ್ರಕರಣಗಳು ಇವೆ.
69 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 21, ಭರಮಸಾಗರ-03, ಹಿರಿಯೂರು ತಾಲ್ಲೂಕು ಧರ್ಮಪುರ-08, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 03, ಹೊಸದುರ್ಗ ತಾಲ್ಲೂಕು ಬೆಲಗೂರು- 05, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 04, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 07 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 08.  ಉಳಿದ 10 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 42 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2102 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 3252 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 583 ಜನ ಹೋಂ ಕ್ವಾರಂಟೈನ್‍ನಲ್ಲಿ ಹಾಗೂ ಇಬ್ಬರು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇದ್ದಾರೆ.  ಈವರೆಗೆ 10411 ಜನರ ಮಾದರಿ ಸಂಗ್ರಹಿಸಲಾಗಿದ್ದು, 6909 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 192 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.