ಚಿತ್ರದುರ್ಗ ; ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ಮತ್ತೆ 30 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 457 ಕ್ಕೆ ಏರಿಕೆಯಾದಂತಾಗಿದೆ.

ಸೋಮವಾರ ಒಟ್ಟು 635 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 30 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.  ಇದರಿಂದಾಗಿ ಸೋಂಕಿತರ ಸಂಖ್ಯೆ 457 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 10 ಜನ ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 151 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 296 ಸಕ್ರಿಯ ಪ್ರಕರಣಗಳು ಇವೆ.

296 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 63, ಭರಮಸಾಗರ-14, ಹಿರಿಯೂರು ತಾಲ್ಲೂಕು ಧರ್ಮಪುರ-31, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 11, ಹೊಸದುರ್ಗ ತಾಲ್ಲೂಕು ಬೆಲಗೂರು- 16, ಕೆ.ಕೆ. ಪುರ 17, ಮೊಳಕಾಲ್ಮೂರು ತಾಲ್ಲೂಕು ರಾಂಪುರ 05, ಹಿರಿಯೂರು ತಾಲ್ಲೂಕು ಮರಡಿಹಳ್ಳಿ 06,  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 10, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ-11, ಹೊಳಲ್ಕೆರೆ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್‍ನಲ್ಲಿ 03, ಚಿತ್ರದುರ್ಗ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ 03. ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 16. ಹೋಂ ಕ್ವಾರಂಟೈನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 64. ಉಳಿದ 26 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 132 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 3978 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರೈನ ಒಟ್ಟು 4086 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ 1013 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 14678 ಜನರ ಮಾದರಿ ಸಂಗ್ರಹಿಸಲಾಗಿದ್ದು, 13382 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 242 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.