ಚಿತ್ರದುರ್ಗ ; ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ ಮತ್ತೆ 40 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 310 ಕ್ಕೆ ಏರಿಕೆಯಾದಂತಾಗಿದೆ.
ಬುಧವಾರದ ವರದಿಯಲ್ಲಿ ಚಿತ್ರದುರ್ಗ ತಾಲ್ಲೂಕು-02, ಹಿರಿಯೂರು-08, ಚಳ್ಳಕೆರೆ-19, ಹೊಳಲ್ಕೆರೆ-06, ಹೊಸದುರ್ಗ-03, ಮೊಳಕಾಲ್ಮೂರು-01.  ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಜಿಲ್ಲೆಯಲ್ಲಿ ಪರೀಕ್ಷಿಸಿದ ಸಂದರ್ಭದಲ್ಲಿ ಪಾಸಿಟೀವ್ ಬಂದಿದೆ.  ಹೀಗಾಗಿ ಒಟ್ಟು 40 ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 44, 30 ವರ್ಷದ ಪುರುಷರು.  ಹಿರಿಯೂರು ತಾಲ್ಲೂಕಿನಲ್ಲಿ 53, 33, 32, 42, 30, 78, 48 ವರ್ಷದ ಪುರುಷರು ಹಾಗೂ 40 ವರ್ಷದ ಮಹಿಳೆ.  ಚಳ್ಳಕೆರೆ ತಾಲ್ಲೂಕಿನಲ್ಲಿ 33, 29, 39, 03, 40, 20, 37, 40, 21, 23, 31, 28, 75 ವರ್ಷದ ಪುರುಷರು.  30, 58, 30, 42, 17, 20 ವರ್ಷದ ಮಹಿಳೆಯರು.  ಹೊಳಲ್ಕೆರೆ ತಾಲ್ಲೂಕಿನಲ್ಲಿ 26, 27, 23, 61, 58 ವರ್ಷದ ಪುರುಷರು ಹಾಗೂ 38 ವರ್ಷದ ಮಹಿಳೆ.  ಹೊಸದುರ್ಗ ತಾಲ್ಲೂಕಿನಲ್ಲಿ 27, 23 ವರ್ಷದ ಪುರುಷರು ಹಾಗೂ 25 ವರ್ಷದ ಮಹಿಳೆ.  ಮೊಳಕಾಲ್ಮೂರು ತಾಲ್ಲೂಕಿನಲ್ಲಿ 26 ವರ್ಷದ ಓರ್ವ ಪುರುಷ ಸೇರಿದಂತೆ ಒಟ್ಟು 40 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಬುಧವಾರ ಒಟ್ಟು 130 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 40 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 310 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 06 ಜನ ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 129 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 175 ಸಕ್ರಿಯ ಪ್ರಕರಣಗಳು ಇವೆ.
175 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 37, ಭರಮಸಾಗರ-01, ಹಿರಿಯೂರು ತಾಲ್ಲೂಕು ಧರ್ಮಪುರ-28, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 10, ಹೊಸದುರ್ಗ ತಾಲ್ಲೂಕು ಬೆಲಗೂರು- 12, ಕೆ.ಕೆ. ಪುರ 05, ಮೊಳಕಾಲ್ಮೂರು ತಾಲ್ಲೂಕು ರಾಂಪುರ 01,   ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 08, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಲ್ಲಿ 08 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 09.  ಉಳಿದ 38 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 87 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 3172 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರೈನ ಒಟ್ಟು 3659 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 1072 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 11,533 ಜನರ ಮಾದರಿ ಸಂಗ್ರಹಿಸಲಾಗಿದ್ದು, 9,684 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 210 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.