ಚಿತ್ರದುರ್ಗ; ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ಮತ್ತೆ 08 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 120 ಕ್ಕೆ ಏರಿಕೆಯಾದಂತಾಗಿದೆ.

ಸೋಮವಾರದ ವರದಿಯಲ್ಲಿ ಚಿತ್ರದುರ್ಗದ 47 ವರ್ಷದ ಪುರುಷ, 45 ವರ್ಷದ ಪುರುಷ, 29 ವರ್ಷದ ಪುರುಷ.  60 ವರ್ಷದ ಮಹಿಳೆ, 80 ವರ್ಷದ ಮಹಿಳೆ ಹಾಗೂ 52 ವರ್ಷದ ಮಹಿಳೆ.  ಹಿರಿಯೂರಿನ 31 ವರ್ಷದ ಮಹಿಳೆ ಮತ್ತು ಚಳ್ಳಕೆರೆಯ 65 ವರ್ಷದ ಪುರುಷ ಸೇರಿದಂತೆ 08 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.  ಸೋಮವಾರ ಒಟ್ಟು 120 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 08 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ.   ಜಿಲ್ಲೆಯ ಒಟ್ಟು 120 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೆ 83 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 36 ಸಕ್ರಿಯ ಪ್ರಕರಣಗಳು ಇವೆ.
36 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 15, ಭರಮಸಾಗರ-02, ಹಿರಿಯೂರು ತಾಲ್ಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 05, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ 01, ಪರಶುರಾಂಪುರ-03, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 02, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ ಮೂವರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 05. ಈವರೆಗೆ ಜಿಲ್ಲೆಯಲ್ಲಿ ಒಬ್ಬರು ಕೋವಿಡ್‍ನಿಂದ ಮೃತಪಟ್ಟಿರುತ್ತಾರೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 32 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1994 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 2900 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 506 ಜನ ಹೋಂ ಕ್ವಾರಂಟೈನ್‍ನಲ್ಲಿ ಹಾಗೂ ಇಬ್ಬರು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇದ್ದಾರೆ.  ಈವರೆಗೆ 9146 ಜನರ ಮಾದರಿ ಸಂಗ್ರಹಿಸಲಾಗಿದ್ದು, 6065 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 192 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.