ಬೆಂಗಳೂರು; ಕ್ಯಾನ್ಸರ್ ಸೇರಿದಂತೆ 50 ಪ್ರಮುಖ ಜೀವ ರಕ್ಷಕ ಔಷಧಗಳನ್ನು ಜನರಿಕ್ ವ್ಯಾಪ್ತಿಗೆ ಸೇರಿಸಲಾಗಿದೆ ಎಂದು ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಜನರಿಕ್ ಔಷಧ ಮಳಿಗೆಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ಸೇರಿದಂತೆ 50 ಔಷಧಗಳನ್ನು ಕೇಂದ್ರ ಸರ್ಕಾರ ಜನರಿಕ್ ವ್ಯಾಪ್ತಿಗೆ ಸೇರಿಸಿಕೊಂಡಿದೆ ಎಂದು ತಿಳಿಸಿದರು.

ಕಳೆದ ಐದು ವರ್ಷಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇವೆಲ್ಲವೂ ಜನರಿಗೆ ಅನುಕೂಲ ಕಲ್ಪಿಸಿದೆ. ಆಯುಷ್ಮಾನ್ ಭಾರತ್ ಯೋಜನೆ ಅನ್ವಯ ಇದುವರೆಗೆ 16985 ಆಸ್ಪತ್ರೆಗಳು ನೋಂದಣಿಯಾಗಿವೆ. 41 ಲಕ್ಷ ಜನರು ಫಲಾನುಭವಿಗಳಾಗಿದ್ದು, 10 ಕೋಟಿ ರೂ. ನ್ನು ಸೆಪ್ಟೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡಲಾಗುತ್ತದೆ ಎಂದರು ಹೇಳಿದರು.!