ಬೆಂಗಳೂರು : ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಜುಲೈ 11 ರ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ತ್ರಿಪುರಾ ವಾಸಿನಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಭಾಲ್ಕಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಈಶ್ವರ್ ಖಂಡ್ರೆ ಕೂಡ ಪದಗ್ರಹಣ ಮಾಡಲಿದ್ದಾರೆಂದು ತಿಳಿದುಬಂದಿದೆ.