ಬೆಂಗಳೂರು : ಮೂರು ಸಲ ಮುಂದೂಡಲ್ಪಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಅಂತಿಮವಾಗಿ ಜುಲೈ2 ಕ್ಕೆ ನಿಗದಿಯಾಗಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೆಚ್ಚು ಜನ ಸೇರಿಸದೆ ಕಾರ್ಯಕ್ರಮ ನಡೆಸುವುದಕ್ಕೆ ನಮ್ಮ ಅಭ್ಯಂತರವಿಲ್ಲವೆಂದು ಸ್ಪಷ್ಪಪಡಿಸಿರುವ ಹಿನ್ನೆಲೆಯಲ್ಲಿ ಪ್ರತಿಜ್ಞಾ ದಿನ ಎಂಬ ಹೆಸರಿನಲ್ಲಿ ಜುಲೈ 2 ರಂದು ಡಿ.ಕೆ. ಶಿವಕುಮಾರ್ ಪದಗ್ರಹಣ ನಡೆಯಲಿದೆ.

ಕರ್ನಾಟಕದ 8 ಸಾವಿರಕ್ಕೂ ಅಧಿಕ ಕಡೆಗಳಲ್ಲಿ ಏಕ ಕಾಲದಲ್ಲಿ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ ಹಾಗೂ ಮುಖಂಡರು, ಕಾರ್ಯಕರ್ತರು ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.