ಬೆಂಗಳೂರು: ಜೂನ್ ಎರಡನೇ ಅಥವಾ ಮೂರನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಸಾಧ್ಯತೆಯನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬಹಿರಂಗಪಡಿಸಿದ್ದಾರೆ.

ಮಂಗಳವಾರ ಫೇಸ್ಬುಕ್ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನುದ್ದೇಶಿಸಿ ಮಾತನಾಡಿದ ಅವರು, ಪರಿಸ್ಥಿತಿ ನೋಡಿಕೊಂಡು 20 ಅಥವಾ 30 ದಿನಗಳ ಒಳಗೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈ ವೇಳಾಪಟ್ಟಿ ಬಿಡುಗಡೆಯಾದ ನಂತರ ಕನಿಷ್ಠ 15 ದಿನ ಅಂತರ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.