ಬೆಂಗಳೂರು : ಹೌದು ರಾಜ್ಯದಲ್ಲಿ 1 ರಿಂದ 7 ನೇ ತರಗತಿ ಮಕ್ಕಳಿಗೆ ಜೂನ್ 2 ನೇ ವಾರ ಹಾಗೂ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ ಮೊದಲ ವಾರದಲ್ಲಿ ತರಗತಿಗಳನ್ನು ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶಾಲಾ ಅವಧಿಯನ್ನು ಬದಲಿಸಲು ಕೂಡ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಲಾಗಿದೆಯಂತೆ.  1 ರಿಂದ 4 ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಗ್ಗೆ ಹಾಗೂ 4 ರಿಂದ 7 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ನಂತರ ತರಗತಿಗಳನ್ನು ನಡೆಸು ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಶಾಲಾ ವೇಳಾಪಟ್ಟಿಯನ್ನು ಮಾರ್ಪಡಿಸಿ 2 ಅವಧಿಯಲ್ಲಿ ತರಗತಿ ನಡೆಸಲು ಶಿಕ್ಷಣ ಇಲಾಖೆ ಯೋಜನೆ ಹಾಕಿಕೊಂಡಿದೆ. !