ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಮೇ 30ಕ್ಕೆ ಒಂದು ವರ್ಷ ಪೂರೈಸಲಿರುವ ಹಿನ್ನೆಲೆ, ದೇಶಾದ್ಯಂತ ಜೂನ್‌ನಲ್ಲಿ ಒಂದು ತಿಂಗಳ ಕಾಲ ಡಿಜಿಟಲ್‌ ರ‍್ಯಾಲಿ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಮೊದಲ ದಿನ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಫೇಸ್‌ಬುಕ್‌ ಲೈವ್‌ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ವತಿಯಿಂದ ದೇಶದ ಎಲ್ಲ 909 ಜಿಲ್ಲೆಯಲ್ಲಿಯೂ ಡಿಜಿಟಲ್‌ ರ‍್ಯಾಲಿ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ತಿಳಿಸಿದ್ದಾರೆ.