ಬೆಂಗಳೂರು: ಮಸ್ಲಿಮರು ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ವೋಟ್ ಹಾಕಿಲ್ಲ ಅವರ ಸಮುದಾಯಕ್ಕೆ ನಾವ್ಯಾಕೆ ಸಚಿವ ಸ್ಥಾನ ಕೊಡಬೇಕು ಎಂದು ಮುಸ್ಲಿಂ ನಾಯಕರ ಮುಂದೆ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರಂತೆ.

ಹಾಗಾಗಿ, ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರು ಜೆಡಿಎಸ್ ಗೆ ವೋಟ್ ಹಾಕಿಲ್ಲ ಎಂದು ದೇವೇಗೌಡರು ದ್ವೇಷ ಸಾಧಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಹಾಗಾದರೆ ಪರಿಷತ್ ಸದಸ್ಯರಾಗಿರುವ ಬಿ.ಎಂ ಫಾರೂಖ್ ಗೆ ಸಚಿವ ಸ್ಥಾನ ಸಿಗುತ್ತಾ ಎಂಬುದರ ಬಗ್ಗೆ ಸಾಮಾಜಿಕ ಜಲತಾಣದಲ್ಲಿ ಹರಿದಾಡುತ್ತಿದೆ.