ಬೆಂಗಳೂರು: ದೊಸ್ತಿ ಸರಕಾರದಲ್ಲಿ ಜೆಡಿಎಸ್ ಪಕ್ಷದಿಂದ ಯಾರು ಮಂತ್ರಿಗಳಾಗುತ್ತಾರೆ ಎಂಬ ಕುತೂಹಲಕ್ಕೆ ಇಲ್ಲಿದೆ ಸಂಭಾವನೀಯ ಪಟ್ಟಿ

ಹಾಸನ ಜಿಲ್ಲೆಯ ಹೊಳೆನರಸೀಪುರದ ಹೆಚ್.ಡಿ. ರೇವಣ್ಣ,

ಅರಸೀಕೆರೆಯ ಕೆ.ಎಂ. ಶಿವಲಿಂಗೇಗೌಡ,

ಮೈಸೂರು ಜಿಲ್ಲೆಯ ಹುಣಸೂರಿನ ಹೆಚ್. ವಿಶ್ವನಾಥ್,

ಚಾಮುಂಡೇಶ್ವರಿಯ ಜಿ.ಟಿ. ದೇವೇಗೌಡ,

ಮಂಡ್ಯ ಜಿಲ್ಲೆ, ಮೇಲುಕೋಟೆಯ ಸಿ.ಎಸ್. ಪುಟ್ಟರಾಜು,

ಬೀದರ್ ನ ಬಂಡೆಪ್ಪ ಕಾಶೆಂಪುರ,

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಗೋಪಾಲಯ್ಯ,

ಮಿತ್ರಪಕ್ಷ ಬಹುಜನ ಸಮಾಜ ಪಾರ್ಟಿಯ ಕೊಳ್ಳೇಗಾಲದ ಶಾಸಕ ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ

ಬಸವರಾಜ ಹೊರಟ್ಟಿ ಸಚಿವರಾಗಲಿದ್ದಾರೆನ್ನಲಾಗಿದೆ.

ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂಬುದು ಸುದ್ದಿ. ಈ ಎಲ್ಲಾ ಅಂತೆ ಕಂತೆಗಳಿಗೆ ಮುಂದಿನವಾರ ಸ್ಪಷ್ಟ ಚಿತ್ರಣ ಸಿಗಲಿದೆ.