ವಿಜಯಪುರ: ಮಹಾರಾಷ್ಟ್ರ ಹಾಗೂ ಕರ್ನಾಟಕ ಬಾಡ್ರ್ ಝಳಿಕಿ ಆರ್.ಟಿ.ಓ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳ ಲಂಚತನವನ್ನು ಬಯಲು ಮಾಡುವಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ಯಶಸ್ವಿ ಆಗಿದ್ದಾರೆ.!

.ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಅವ್ಯವಹಾರ ನಡೆಸಿರುವುದು, ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿರುವುದು ಕಂಡು ಬಂದ ಹಿನ್ನಲೆಯಲ್ಲಿ ಆರ್.ಟಿ.ಓ. ಅಧಿಕಾರಿ ಸೇರಿ 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಸಂಗ್ರಹಿಸಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.

ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರ್.ಟಿ.ಓ. ಅಧಿಕಾರಿ, ಇಬ್ಬರು ಹೋಂಗಾರ್ಡ್ಸ್ ಸೇರಿ 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಎ.ಸಿ.ಬಿ. ಎಸ್.ಪಿ. ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ. ಮಲ್ಲೇಶ್ ದೊಡ್ಡಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.