ಬೆಂಗಳೂರು: ಹೌದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದೇ ಜುಲೈ 12 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅನಿರ್ದಿಷ್ಟಾವಧಿ ಅವಧಿಗೆ ಮುಂದೂಡಿದೆ.!

ಕೊರೋನಾ ಹಿನ್ನೆಲೆಯಲ್ಲಿ ಜುಲೈ 2 ರಿಂದ ಆಗಸ್ಟ್ 8 ರ ವರೆಗೆ 4 ಭಾನುವಾರ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿ ಮಾಡಿದೆ. ಹೀಗೆ ಲಾಕ್ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಟಿಇಟಿ ಪರೀಕ್ಷೆ ನಡೆಸಲು ಅಸಾಧ್ಯವಾಗಿದೆ. ಮುಂದಿನ ಪರಿಸ್ಥಿತಿಯನ್ನು ಆಧರಿಸಿ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗುತ್ತದೆ.