ಮೈಸೂರು: ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಸಂಸದ ಪ್ರತಾಪ್ ಸಿಂಹಗೆ ಮಾಡಲು ಕೆಲಸವಿಲ್ಲ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಹೇಳಿದರು.

ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಆಹಾರ ಮೇಳ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಸಂಸದ ಪ್ರತಾಪ್ ಸಿಂಹಗೆ ಕೆಲಸವಿಲ್ಲ. ಹಾಗಾಗಿ ಇಂತಹ ಮಾತುಗಳನ್ನು ಆಡುತ್ತಾರೆ. ಟಿಪ್ಪು ಜಯಂತಿ ನಿಲ್ಲಿಸಲು ಸಾಧ್ಯವಿಲ್ಲ. ಕಳೆದ ಮೂರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಯಾವುದೇ ಕಾರಣಕ್ಕೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.