ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟಿಪ್ಪು ಜಯಂತಿ ಕುರಿತ ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ನವೆಂಬರ್ 10 ರಂದು ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಕಟಿಸಲಾಗಿಲ್ಲ. ಪ್ರತಿಪಕ್ಷದಲ್ಲಿದ್ದಾಗ ಕುಮಾರಸ್ವಾಮಿ ಅವರು  ಈ ಹಿಂದೆ ಟಿಪ್ಪು ಜಯಂತಿ ಅನಗತ್ಯ ಎಂದಿದ್ದರು.

ಇನ್ನು ಕೆಲ ದಿನಗಳ ಹಿಂದೆ ಮಾಧ್ಯಮಗಳು ಟಿಪ್ಪು ಜಯಂತಿ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೇಳಿದಾಗ, ನನಗೆ ಇದಕ್ಕಿಂತ ಮುಖ್ಯ ಕೆಲಸಗಳಿವೆ ಎಂದು ಪ್ರತಿಕ್ರಿಯಿಸಿದ್ದರು.

ಈ ಅನುಮಾನಕ್ಕೆ ಕಾರಣ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರ ಹೆಸರನ್ನೇ ಮುದ್ರಿಸಿಲ್ಲ ಹಾಗಾಗಿ ಟಿಪ್ಪು ಜಯಂತಿಗೆ ಸಿಎಂ ಕುಮಾರಸ್ವಾಮಿ ಗೈರು ಆಗಲಿದ್ದಾರೆ. ಕಾಕ ತಾಳಿಯ ಎಂಬಂತೆ ಮತ್ತೊಂದು ಮೂಲದ ಪ್ರಕಾರ ಕುಮಾರಸ್ವಾಮಿಗೆ ಆರೋಗ್ಯದಲ್ಲಿ ಏರು ಪೇರು ಉಂಟಾಗಿದೆ ಎಂಬುದು ಸುದ್ದಿ.