ಬೆಂಗಳೂರು: ಮಾರ್ಚ್ 03 ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ವಿಧಾನಸಭೆ ಸದಸ್ಯತ್ವಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್  ರಾಜೀನಾಮೆ ಅಂಗೀಕಾರವಾಗಿದೆ.

ದೋಸ್ತಿ ಸರಕಾರದ ಸಚಿವ ಪುನರ್‌ ರಚನೆ ವೇಳೇಯಲ್ಲಿ ತಮಗೆ ಸಚಿವ ಸ್ಥಾನ ನೀಡದೆ ಪಕ್ಷದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದ ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ್‌ ಕಾಂಗ್ರೆಸ್‌ ಪಕ್ಷದಿಂದ ಹೊರಬಂದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಲೋಕಸಭಾ ಚುನಾವಣೆಯಲ್ಲಿ  ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಭ್ಯರ್ಥಿ ಆಗಿದ್ದಾರೆ.