ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೊಲೇಶನ್‌ನಲ್ಲಿದ್ದಾರೆ.

ಸ್ವತಃ ಡಿಸಿಎಂ ಅಶ್ವತ್ಥನಾರಾಯಣ ಅವರೇ ಟ್ವೀಟ್‌ ಮೂಲಕ ಈ ವಿಷ್ಯ ಸ್ಟಷ್ಟಪಡಿಸಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ.

ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.