ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ  ಜವಬ್ದಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೊಟ್ಟಿರುವುದು ಕಟುಕನ ಕೈಗೆ ಕುರಿ ನೀಡಿದಂತೆ’ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹೀರೆಮಠ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಈ ಹಿಂದೆ ಇಂಧನ ಸಚಿವರಾಗಿದ್ದ ವೇಳೆ ಸೋಲಾರ್ ಹಗರಣ, ರಿಪಬ್ಲಿಕ್ ಆಫ್ ರಾಮನಗರ ಮಾಡಿದ್ದು, ಇಂತಹ ವ್ಯಕ್ತಿಗೆ ಬಳ್ಳಾರಿ ಉಸ್ತುವಾರಿ ನೀಡಿದ್ದು, ಸರಿಯಲ್ಲಾ ಎಂದು ಹೇಳಿದರು.

ಈ ಹಿಂದೆ ಮೈಸೂರು ಮಿನರಲ್ಸ್ ಲಿಮಿಟೆಡ್ ಕಂಪೆನಿಯಿಂದ 10.8ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಶಿವಕುಮಾರ್ ಲೂಟಿ ಮಾಡಿದ್ದಾರೆ. ಹೀಗಾಗಿ ಅವರಿಗೆ ಜಿಲ್ಲಾ ಉಸ್ತುವಾರಿ ನೀಡಿರುವುದು ಕಟುಕನ ಕೈಗೆ ಕುರಿ ನೀಡಿದಂತೆ.  ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದ ಹೇಳಿದ್ದಾರೆ.