ಬೆಂಗಳೂರು: ಮುಂಗಾರಿನ ಕೃಷಿ ಚಟುವಟಿಕೆಗಳಿಗೆ ಹಣ ಅಗತ್ಯವಾಗಿದ್ದು, ರೈತರು ಸಾಲ ಸೌಲಭ್ಯ ಸಿಗದೇ ವಂಚಿತರಾಗಬಹುದು ಎಂಬ ಕಾರಣಕ್ಕೆ ಡಿಸಿಸಿ ಬ್ಯಾಂಕ್ ಗಳ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರುಗಳ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಡಿಸಿಸಿ ಬ್ಯಾಂಕ್ ಗಳ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಅವಧಿ ಮುಕ್ತಾಯವಾಗಿದ್ದರೂ ಚುನಾವಣೆಯನ್ನು ಮುಂದಿನ 6 ತಿಂಗಳ ಕಾಲ ಮುಂದೂಡಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.