ಬೆಂಗಳೂರು: ಡಿಸೆಂಬರ್ 15 ರಿಂದ ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಮಕ್ಕಳಿಗೆ ಶಾಲೆ-ಕಾಲೇಜು ಆರಂಭವಾಗುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ.

ಪೋಷಕರು ಮತ್ತು ಖಾಸಗಿ ಶಾಲೆಗಳ ಮುಖ್ಯಸ್ಥರು ಶಾಲೆಗಳ ಆರಂಭಕ್ಕೆ ಸಮ್ಮತಿಸಿದ್ದು, ದೀಪಾವಳಿ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಈ ಕುರಿತು ವರದಿ ಸಲ್ಲಿಸಲಾಗಿದೆ. ಮತ್ತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು  

ಪಾಳಿ ವ್ಯವಸ್ಥೆಯಲ್ಲಿ ಶಾಲೆ ಆರಂಭಿಸಬೇಕು, ಸಮವಸ್ತ್ರ ಶೂ, ಸಾಕ್ಸ್ ಧರಿಸಲು ಆಡಳಿತ ಮಂಡಳಿಗಳು ಮಾಡಬಾರದು, ತರಗತಿ ಆರಂಭದ ಹೆಸರಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು ಎಂಬುದು ಸೇರಿದಂತೆ ಪೋಷಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.