ಬೆಳಗಾವಿ : ಡಿ.ಕೆ ರವಿ ಪತ್ನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಕೆಲವರು ಶಿಫಾರಸು ಮಾಡ್ತಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅವರು ಇಂದು ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ, ಕೆಲವು ಹಿರಿಯ ನಾಯಕರು ಆರ್.ಆರ್.ನಗರ ಕ್ಷೇತ್ರದಲ್ಲಿ ದಿವಂಗತ ಡಿ.ಕೆ ರವಿ ಪತ್ನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಕೆಲವರು ಶಿಫಾರಸು ಮಾಡ್ತಿದ್ದಾರೆ ಆದರೆ ನಾನು ಈ ಬಗ್ಗೆ ಇನ್ನೂ ಚರ್ಚೆ ನಡೆಸಿಲ್ಲ ಅಂತ ಹೇಳಿದರು.