ಬೆಂಗಳೂರು : ಶಾಸಕ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ಸರ್ಚ್ ವಾರೆಂಟ್ ಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಆಪ್ತರಾದ 11 ಜನರ ವಿರುದ್ಧ ಸಿಬಿಐ ಸರ್ಚ್ ವಾರೆಂಟ್ ಜಾರಿಯಾಗಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಕುರಿತು ಹಲವಾರು ಬಾರಿ ಚರ್ಚೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಹಿಗಾಗಿ ತಾವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದಾಗಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸದ್ದಾರೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮೀ ಹೇಳಿದ್ದಾರೆ.