ಬೆಂಗಳೂರು:ಡಿಸೆಂಬರ್‌ 22 ಕ್ಕೆ ಸಂಪುಟ ವಿಸ್ತರಣೆ ಮಾಡುವುದು ಖಚಿತ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ‘ನಾವು ಡಿಸೆಂಬರ್‌ 9 ರಂದು ಸಂಪುಟ ವಿಸ್ತರಣೆ ಮಾಡಬೇಕು ಅಂದಿದ್ದೇವು, ಆದರೆ ಮರುದಿನ ಅಧಿವೇಶನ ಆರಂಭವಾಗುತ್ತದೆ. ಸದನದಲ್ಲಿ ಹೊಸ ಸಚಿವರುಗಳಿಗೆ ಉತ್ತರ ನೀಡುವುದು ಕಷ್ಟವಾಗುತ್ತದೆ ಅಂತ ಮಾಡಲಿಲ್ಲ. ಒಂದು ದಿನದಲ್ಲಿ ಏನೂ ಮಾಡಲು ಸರಿ ಅಲ್ಲ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು 21 ರಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸಮಯ ನೀಡಿದ್ದಾರೆ. ಅವರನ್ನು ಭೇಟಿಯಾಗಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ 22 ಕ್ಕೆ ವಿಸ್ತರಣೆ ಮಾಡುತ್ತೇವೆ. ಜೆಡಿಎಸ್‌ನ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದರು.