ಬೆಂಗಳೂರು: ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ, ಡಿ.5ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ನಡೆಸುವುದು ಶತಸಿದ್ಧ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.5 ರಂದು ಕರ್ನಾಟಕ ಬಂದ್ ಮಾಡುವುದು ಖಚಿತ. ಇದನ್ನು ತಡೆಯಲು ಸಾಧ್ಯವಿಲ್ಲ. ಅಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ. ದಲಿತ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬಂದ್ ಗೆ ಬೆಂಬಲಿಸಿವೆ ಎಂದು ಹೇಳಿದ್ದಾರೆ.