ಬೆಂಗಳೂರು: ಎರಡು ದಿನಗಳ ಹಿಂದೆ ನಟಿ ಐಂದ್ರಿತಾ ರೇಯವರು ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದ ವಿಡಿಯೋ, ಫೋಟೋ ವೈರಲ್‌ ಆಗಿತ್ತು. ಈ ವೇಳೆ ಈ ಪ್ರಕರಣದ ಆರೋಪಿ ಶೇಖ್‌ ಫಾಝಿಲ್‌ ಜೊತೆ ಇದ್ದ ಫೋಟೋಗಳು ಸಹ ಸಿಕ್ಕಿದ್ದು, ಈ ಹಿನ್ನಲೆಯಲ್ಲಿ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ಸಿಸಿಬಿ  ನೋಟಿಸ್​ ಜಾರಿಮಾಡಿದೆ.

ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಲು ತಿಳಿಸಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಗೆ ಬರುವಂತೆ ಸ್ಯಾಂಡಲ್​ವುಡ್​ ನಟಿ ಐಂದ್ರಿತಾ ರೇ ಕೂಡ ಪ್ರಮೋಟ್​ ಮಾಡಿದ್ದು, ಈ ವಿಡಿಯೋ ಇದೀಗ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ  ನೋಟಿಸ್ ಜಾರಿಮಾಡಿದೆ.